ಸುರಕ್ಷಿತ ನೋಂದಣಿ ಫಲಕ(HSRP) ತಯಾರಕರೊಂದಿಗೆ ಮುಂದಿನ ವಾರ ಸಭೆ: ಹೈಕೋರ್ಟ್‍ಗೆ ಸರಕಾರದ ಮಾಹಿತಿ

Update: 2023-11-24 13:59 GMT

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ(ಎಚ್.ಎಸ್.ಆರ್.ಪಿ) ತಯಾರಕರಿಗೆ ಅನುಮತಿ ನೀಡುವ ಕುರಿತು ಅರ್ಜಿದಾರರು ಸೇರಿದಂತೆ ಸಂಬಂಧಪಟ್ಟ ಪಾಲುದಾರರೊಂದಿಗೆ ಮುಂದಿನ ವಾರ ಸಭೆ ನಡೆಸಿ, ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುವುದಾಗಿ ರಾಜ್ಯ ಸರಕಾರವು ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಎಚ್.ಎಸ್.ಆರ್.ಪಿ ತಯಾರಕರ ಒಕ್ಕೂಟ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿತು.

ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ ಅವರು, ಈ ತಿಂಗಳಲ್ಲಿ ಸಭೆ ನಿದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ಎಲ್ಲ ಪಾಲುದಾರರನ್ನು ಸಭೆಗೆ ಆಹ್ವಾನಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಮುಂದಿನ ವಾರ ಸಭೆ ನಡೆಸಲಾಗುವುದು ಎಂದು ಪೀಠಕ್ಕೆ ಮಾಹಿತಿ ನೀಡಿದರು.

 ಎಚ್.ಎಸ್.ಆರ್.ಪಿ ತಯಾರಕರ ಸಂಘದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು, ಸರಕಾರ ನಡೆಸುವ ಸಭೆಗೆ ಸಂಬಂಧಿಸಿದಂತೆ ಎಲ್ಲ ಪಾಲುದಾರರನ್ನು ಸೇರಿಸಿ ಸಭೆ ನಡೆಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಆದರೂ, ಸಭೆಗೆ ಯಾವುದೇ ಪಾಲುದಾರರನ್ನು ಸರಕಾರ ಆಹ್ವಾನಿಸಿಲ್ಲ ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News