ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ 'ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್' ಸದಸ್ಯರು
ಬೆಂಗಳೂರು: ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಪದಾಧಿಕಾರಿಗಳು ಇಂದು (ಬುಧವಾರ)ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಯ ಪರಿಣಾಮ ಮತ್ತು ಪಿತೂರಿ ಕುರಿತು ಚರ್ಚಿಸಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಹಾಗೂ ಭಾರತದ ಎಲ್ಲಾ ಜಾತ್ಯತೀತ ಮೌಲ್ಯಗಳನ್ನು ಬುಡಮೇಲು ಮಾಡುವ ಮತ್ತು ಆದಿವಾಸಿ, ಬುಡಕಟ್ಟು, ದಲಿತ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳನ್ನು ಇದು ಕಸಿದುಕೊಳ್ಳಲಿದೆ ಎಂದು ಚರ್ಚಿಸಿದರು.
ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ಸದಸ್ಯ ಮೌಲಾನ ಸೈಯದ್ ತನ್ವೀರ್ ಹಾಶ್ಮಿ, ಮೌಲಾನ ಸೈಯದ್ ಶಬ್ಬೀರ್ ಅಹ್ಮದ್ ನದ್ವಿ, ಕೇಂದ್ರದ ಮಾಜಿ ಸಚಿವ ರಹ್ಮಾನ್ ಖಾನ್, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಸೇರಿದಂತೆ ಇನ್ನಿತರರು ನಿಯೋಗದಲ್ಲಿದ್ದರು.
ಈ ಸಂದರ್ಭದಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.