ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕುಂಠಿತವಾಗಿಲ್ಲ : ಸಚಿವ ಭೋಸರಾಜು

Update: 2024-07-05 11:30 GMT

ಮೈಸೂರು : ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕುಂಠಿತವಾಗಿಲ್ಲ, ನಮ್ಮ ಸಣ್ಣ ನೀರಾವರಿ ಇಲಾಖೆಗೆ ಅಗತ್ಯ ಅನುದಾನ ಲಭ್ಯವಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌.ಭೋಸರಾಜು ತಿಳಿಸಿದರು.

ಇಂದು ಮೈಸೂರಿನಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳು ಬಹಳಷ್ಟು ಜನರ ಜೀವನದಲ್ಲಿ ಅಭಿವೃದ್ದಿಗೆ ಕಾರಣವಾಗಿವೆ. ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಿದ ರಾಜ್ಯ ನಮ್ಮದಾಗಿದೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಸರಕಾರ ಅಭಿವೃದ್ದಿಯ ಪಥದಲ್ಲಿ ಸಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕಾರ್ಯಗಳಲ್ಲಿ ಕುಂಠಿತವಾಗಿದೆ, ಅನುದಾನ ದೊರೆಯುತ್ತಿಲ್ಲ ಎನ್ನುವ ಬಿಜೆಪಿ ಮುಖಂಡರುಗಳ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು.

ಚುನಾವಣೆಯ ಹಿನ್ನಲೆಯಲ್ಲಿ ಸರಕಾರದ ಕಾರ್ಯಕ್ರಮಗಳು ಹೆಚ್ಚಾಗಿ ಪ್ರಚಾರವಾಗಿಲ್ಲ. ಆದರೆ, ಎಲ್ಲಾ ಇಲಾಖೆಗಳಿಗೂ ಅದರಲ್ಲೂ ನಮ್ಮ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಅಗತ್ಯ ಅನುದಾನ ದೊರೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News