ಡಾ.ಕೆ.ಕಸ್ತೂರಿ ರಂಗನ್ ವರದಿ : ಸಂಪುಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ತೀರ್ಮಾನ : ಸಚಿವ ಈಶ್ವರ್ ಖಂಡ್ರೆ

Update: 2024-08-05 12:36 GMT

ಬೆಂಗಳೂರು : ಪಶ್ಚಿಮಘಟ್ಟಗಳ ಸಂರಕ್ಷಣೆ ಸಂಬಂಧದ ಡಾ.ಕೆ.ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಸಚಿವ ಸಂಪುಟದಲ್ಲಿ ಸಮಾಲೋಚಿಸಿ, ಸರ್ವಪಕ್ಷಗಳ ನಾಯಕರ ಅಭಿಪ್ರಾಯ ಪಡೆದು, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ಈಗಾಗಲೇ ಈ ವರದಿ ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಈಗ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಂಪುಟದಲ್ಲಿ ಸಮಾಲೋಚಿಸಿ, ಸರ್ವಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತೊಂದು ಅಧಿಸೂಚನೆ ಹೊರಡಿಸಿದೆ. ರಾಜ್ಯದ 20,668 ಚದರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ರಾಜ್ಯದ 33 ತಾಲೂಕುಗಳ 1533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಇದೆ ವೇಳೆ ಹೇಳಿದರು.

ಇನ್ನೂ, ಕೇಂದ್ರ ಸರಕಾರ ಕಸ್ತೂರಿ ರಂಗನ್ ವರದಿ ಕುರಿತಂತೆ ಎಲ್ಲ ಬಾಧ್ಯಸ್ಥರೊಂದಿಗೆ ಅಂದರೆ 1533 ಗ್ರಾಮಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ನಿವಾಸಿಗಳೊಂದಿಗೆ ಚರ್ಚಿಸಿ, ಸಾಧಕ ಬಾಧಕ ಅರಿತು ವರದಿ ನೀಡಲು ನಿವೃತ್ತ ಐಎಫ್‍ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ರಚಿಸಿತ್ತು. ಆ ಸಮಿತಿ ಸದಸ್ಯರು ತಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಆದರೆ ಯಾವುದೇ ಗ್ರಾಮಕ್ಕೆ ಭೇಟಿ ನೀಡಲಿಲ್ಲ. ಜನರೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News