ಪಶ್ಚಿಮಘಟ್ಟದಲ್ಲಿ 69 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ್‌ ಖಂಡ್ರೆ

Update: 2024-08-05 13:52 GMT

ಬೆಂಗಳೂರು, ಆ.5: ರಾಜ್ಯದ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಈಗಾಗಲೇ ಒಟ್ಟು 69 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ.29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ.55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ.9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ ಎಂದರು.

ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News