‘ಬೆಳಗಾವಿ ಜಿಲ್ಲೆ ವಿಭಜನೆ’ ದಸರಾ ಬಳಿಕ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-09-28 15:35 GMT

ಬೆಳಗಾವಿ : ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳಾಗಿ ಮಾಡಬಹುದು. ಜಿಲ್ಲೆ ವಿಭಜನೆಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ದಸರಾ ಹಬ್ಬ ಮುಕ್ತಾಯಗೊಂಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸಭೆ ನಡೆಸಲಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಕಟಿಸಿದರು.

ಶನಿವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ಗೃಹಲಕ್ಷ್ಮೀ ಯೋಜನೆ ಜುಲೈ ತಿಂಗಳಿನಲ್ಲಿ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದೆ, ಇದಾದ ಕೆಲವು ದಿನಗಳಲ್ಲಿ ಆಗಸ್ಟ್ ತಿಂಗಳ ಹಣವೂ ಪ್ರಕಟವಾಗಿದೆ. ಇದು ನಿರಂತರ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ ನಿರಾಣಿ ಕೊಡುಗೆ ಏನು?: ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಕೊಡುಗೆ ಏನು ಎಂದು ಪ್ರಶ್ನಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಯಾವಾಗಲೂ ಪಂಚಮಸಾಲಿ ಮೀಸಲಾತಿ ಪರ, 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲವಿದೆ ಎಂದು ಹೇಳಿದರು.

ಮುರುಗೇಶ್ ನಿರಾಣಿ ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ಅವರು ಪ್ರಕಟಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News