ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆ | ಸದ್ಯದಲ್ಲೇ ಕೇಂದ್ರ ಸಚಿವ ಎಚ್‍ಡಿಕೆ ಭೇಟಿ : ಸಚಿವ ಎಂ.ಬಿ.ಪಾಟೀಲ್

Update: 2024-06-18 13:42 GMT

ಬೆಂಗಳೂರು : ಕರ್ನಾಟಕದವರೇ ಆದ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರ ಸರಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಹೂಡಿಕೆ ಆಕರ್ಷಣೆ ಮತ್ತು ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಸದ್ಯದಲ್ಲೇ ಅವರನ್ನು ಭೇಟಿ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್ ಸೆಮಿಕಂಡಕ್ಟರ್ ಕಂಪೆನಿಗೆ ಕೇಂದ್ರ ಸರಕಾರ ಶೇ.50 ಮತ್ತು ಅಲ್ಲಿನ ರಾಜ್ಯ ಸರಕಾರ ಶೇ.20ರಷ್ಟು ಪ್ರೋತ್ಸಾಹಧನ ನೀಡುತ್ತಿವೆ. ನಮಗೂ ಇದೇ ಮಾದರಿಯ ಉತ್ತೇಜನ ಬೇಕಾಗಿದೆ. ಈ ಸಂಬಂಧ ಕುಮಾರಸ್ವಾಮಿ ಅವರನ್ನು ಭೇಟ ಮಾಡಿ ಬಂಡವಾಳ ಆಕರ್ಷಣೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಸೆಮಿಕಂಡಕ್ಟರ್ ಕ್ಷೇತ್ರವು ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿದೆ. ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಸಮಾನ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕಾದ್ದು ಅಪೇಕ್ಷಣೀಯ ಎಂದು ಅವರು ಅಭಿಪ್ರಾಯಪಟ್ಟರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News