ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಹ್ಲಾದ್ ಜೋಶಿ
ಹೊಸದಿಲ್ಲಿ : ಸೋಮವಾರ ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಪ್ರಹ್ಲಾದ್ ಜೋಶಿ ಅವರು ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಸಂಸತ್ ನಲ್ಲಿ ಕನ್ನಡತನ ಎತ್ತಿ ಹಿಡಿದರು.
2024ರ ಲೋಕಸಭೆ ಚುನಾವಣೆ ಬಳಿಕ ನೂತನ ಸಂಸತ್ ಭವನದಲ್ಲಿ ಸೋಮವಾರ ಮೊದಲ ಬಾರಿ ಆಯೋಜಿಸಿದ್ದ ಅಧಿವೇಶನದ ವೇಳೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ, ಧಾರವಾಡ ಲೋಕಸಭೆ ಕ್ಷೇತ್ರದಿಂದ ಸತತ 5ನೇ ಬಾರಿ ಬಿಜೆಪಿಯಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಪ್ರಹ್ಲಾದ್ ಜೋಶಿ ಅವರು ಸಂಸತ್ ನಲ್ಲಿ ಪ್ರಧಾನಿ ಮೋದಿ ಸಂಗಡ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಸಕ್ತ ಅಧಿವೇಶನದಲ್ಲಿ "ಪ್ರಹ್ಲಾದ್ ವೆಂಕಟೇಶ ಜೋಶಿಯಾದ ನಾನು" ಎಂದು ಕನ್ನಡದಲ್ಲೇ ಮಾತನಾಡುತ್ತ, ಪ್ರತಿಜ್ಞಾ ಪತ್ರ ಓದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ದೇಶದ ಅಖಂಡತೆ, ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಜತೆಗೆ ನನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಶ್ರದ್ಧೆ ಮತ್ತು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರಮಾಣಗೈದರು.