ನಾಳೆ(ಜು.30) ಇ-ಸ್ವತ್ತು ತಂತ್ರಾಂಶ ಸ್ಥಗಿತ : ಸಚಿವ ಪ್ರಿಯಾಂಕ್ ಖರ್ಗೆ

Update: 2024-07-29 15:48 GMT

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇಂದು ಸಹ (ಜು.30)ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸೋಮವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿ ಆ.2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು, ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮ ಠಾಣಾದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಪ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News