ಕಲ್ಯಾಣ ಕರ್ನಾಟಕ ಭಾಗದಲ್ಲಿ 480 ಸಮುದಾಯ ಶೌಚಾಲಯ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ

Update: 2024-11-14 15:32 GMT

ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಶೌಚಾಲಯಗಳ ನಿರ್ಮಾಣವನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿರುವುದರಿಂದ ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಗ್ರಾಮೀಣ ನೀರು ಸರವರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News