ಶಾಸಕ ಎಚ್.ಡಿ.ರೇವಣ್ಣ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ | ನ.25ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2024-10-25 16:28 GMT

ಎಚ್.ಡಿ.ರೇವಣ್ಣ

ಬೆಂಗಳೂರು : ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ.25ಕ್ಕೆ ಮುಂದೂಡಿದೆ.

ಈ ಕುರಿತಾಗಿ ಡಿ.ದೇವರಾಜೇಗೌಡ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನೆ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ಹಾಗೂ ದೂರುದಾರರ ಪರ ವಕೀಲರು ವಾದ ಮಂಡಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ನ.25ಕ್ಕೆ ಮುಂದೂಡಿದೆ.

ಚುನಾವಣಾ ಅಕ್ರಮಗಳಿಂದ ಎಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News