ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಸಂತಾಪ

Update: 2024-02-25 13:02 GMT

Photo : X/@siddaramaiah

ಬೆಂಗಳೂರು : ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

"ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ"

ಮುಖ್ಯಮಂತ್ರಿ ಸಿದ್ದರಾಮಯ್ಯ

"ಸುರಪುರ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರು ಸಾವಿಗೀಡಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಜನಾನುರಾಗಿ ಹಾಗೂ ಜನಪ್ರಿಯ ನಾಯಕರಾದ ಅವರ ಸಾವಿನಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಕುಟುಂಬದವರು‌ ಹಾಗೂ ಬೆಂಬಲಿಗರಿಗೆ ನನ್ನ ಸಾಂತ್ವನಗಳು"

ಡಿಸಿಎಂ ಡಿ.ಕೆ. ಶಿವಕುಮಾರ್‌

"ಸುರಪುರದ ಜನಪ್ರಿಯ ಶಾಸಕರಾಗಿ ಚುನಾಯಿತರಾಗಿದ್ದ ರಾಜ ವೆಂಕಟಪ್ಪ ನಾಯಕ ಅವರು ಸದಾ ಹಸನ್ಮುಖಿಯಾಗಿ ಎಲ್ಲರ ಜೊತೆ ಬೆರೆತು ಕೆಲಸ ಮಾಡುತ್ತಿದ್ದವರು. ಅವರು ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಶಾಸಕರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ನಿಧನದಿಂದುಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲೆಂದು ವಿನಂತಿಸುತ್ತೇನೆ.

ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷರು

"ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ"

ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News