ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Update: 2023-08-03 17:18 GMT

ಬೆಂಗಳೂರು, ಆ. 3: ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಇತರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಸಂದರ್ಭದಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಇತರೆ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿದ್ದು, ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ 2013ರ ಸೆಕ್ಷನ್ 7(ಡಿ) ಅಡಿಯಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಅವಕಾಶವಿದ್ದ ಆ ಸೆಕ್ಷನ್ 7 (ಡಿ) ರದ್ದು ಮಾಡಲಾಗಿದೆ. ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟ ಒಟ್ಟು 11,144 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿದೆ. ಇಷ್ಟು ಹಣವನ್ನು ಕಡ್ಡಾಯವಾಗಿ ಪರಿಶಿಷ್ಟರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಗೃಹಲಕ್ಷ್ಮಿ-5,075 ಕೋಟಿ ರೂ., ಅನ್ನಭಾಗ್ಯ-2779 ಕೋಟಿ ರೂ., ಗೃಹಜ್ಯೋತಿ-2,410 ಕೋಟಿ ರೂ., ಶಕ್ತಿ-812 ಕೋಟಿ ರೂ.ಹಾಗೂ ಯುವನಿಧಿ-67 ಕೋಟಿ ರೂ. ಸೇರಿದಂತೆ ಒಟ್ಟು 11,144 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News