ವಿಪಕ್ಷಗಳ ಗದ್ದಲದ ನಡುವೆಯೇ ಆರು ವಿಧೇಯಕಗಳ ಮಂಡನೆ

Update: 2024-07-24 20:45 IST
ವಿಪಕ್ಷಗಳ ಗದ್ದಲದ ನಡುವೆಯೇ ಆರು ವಿಧೇಯಕಗಳ ಮಂಡನೆ
  • whatsapp icon

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಪ್ರತಿಪಕ್ಷಗಳ ಸದಸ್ಯರು ವಿಧಾನಸಭೆಯ ಸದನದ ಬಾವಿಗಿಳಿದು ಧರಣಿ ನಡೆಸುತ್ತಿರುವಾಗಲೆ 2024ನೆ ಸಾಲಿನ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಸೇರಿದಂತೆ ಆರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

2024ನೆ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ, ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು(ತಿದ್ದುಪಡಿ) ವಿಧೇಯಕ, ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ(ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಸರಕಾರಿ ಉದ್ಯಾನವನಗಳ(ಸಂರಕ್ಷಣೆ)(ತಿದ್ದುಪಡಿ) ವಿಧೇಯಕವನ್ನು ಮಂಡನೆ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News