ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ: ಎಚ್ಚರವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Update: 2023-09-11 06:21 GMT

ಬೆಂಗಳೂರು: ʼರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಡೆಂಗಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆʼʼ ಎಂದು ತಿಳಿಸಿದ್ದಾರೆ. 

ʼʼಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಗಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿʼʼ ಎಂದು ಅವರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News