ಬಿಜೆಪಿ–ಜೆಡಿಎಸ್ ಮೈತ್ರಿ ಮಾತುಕತೆ ಬೆನ್ನಲ್ಲೇ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂಸದೆ ಸುಮಲತಾ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಸಂಸದೆಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

Update: 2023-09-19 12:04 GMT

Photo: X/@sumalathaA

ಹೊಸದಿಲ್ಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಸಂಸದೆಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

“ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದೆ.” ಎಂದು ಪ್ರಧಾನಿ ಭೇಟಿ ಬಳಿಕ ‘ಎಕ್ಸ್‌’ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

“ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ ಸಂಬಂಧಿಸಿದ ಅನೇಕ ಸಲಹೆ ಸಹಕಾರವನ್ನು ಮಾನ್ಯ ಪ್ರಧಾನ ಮಂತ್ರಿಗಳು ನೀಡಿದರು. ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಫೂರ್ತಿ ಹಾಗೂ ಮಾದರಿ. ಧನ್ಯವಾದಗಳು ಸರ್.” ಎಂದು ಸಂಸದೆ ಪೋಸ್ಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News