ಮುಡಾ ಪ್ರಕರಣ | ಸಿಎಂ ವಿರುದ್ಧ ಖಾಸಗಿ ದೂರು : ಆದೇಶ ಕಾಯ್ದಿರಿಸಿದ ಕೋರ್ಟ್

Update: 2024-08-09 13:48 GMT

ಸಿದ್ದರಾಮಯ್ಯ(PTI)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಖಾಸಗಿ ದೂರು ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​ ಆದೇಶ ಕಾಯ್ದಿರಿಸಿ​ದೆ.

ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರ ಸಲ್ಲಿಸಿದ್ದ ಖಾಸಗಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಕಾಯ್ದಿರಿಸಿ, ವಿಚಾರಣೆಯನ್ನು ಆ.13ಕ್ಕೆ ಮುಂದೂಡಿದರು.

ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಬಗ್ಗೆ  ಅಂದು ಆದೇಶ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News