ಮುಡಾ ಹಿಂದಿನ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅಮಾನತು

Update: 2024-09-02 17:46 GMT

ಜಿ.ಟಿ.ದಿನೇಶ್ ಕುಮಾರ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಿಂದಿನ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ರಾಜ್ಯಪಾಲರ ಆದೇಶನುಸಾರ ಅಮಾನತು ಮಾಡಿ ಹೊರಡಿಸಲಾಗಿದೆ.

ಮುಡಾ ಹಗರಣ ಬಯಲಾಗುತ್ತಿದ್ದಂತೆ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಅವರನ್ನು ಹಾವೇರಿ ವಿವಿ ಕುಲಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಅವರನ್ನು ಅಮಾನತು ಮಾಡಲಾಗಿದೆ.

ಜಿ.ಟಿ.ದಿನೇಶ್ ಕುಮಾರ್ ಅವರನ್ನು ಹಾವೇರಿ ವಿವಿ ಕುಲಸಚಿವರನ್ನಾಗಿ ನೇಮಕ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿತ್ತು. ಮುಡಾದಲ್ಲಿ ಹಗರಣ ನಡೆದಿದ್ದು ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ ಆರೋಪ ಕೇಳಿ ಬಂದಿದೆ. ತನಿಖೆಯಾಗುತ್ತಿರುವ ಸಮಯದಲ್ಲೇ ಅವರನ್ನು ಹಾವೇರಿ ವಿವಿ ಕುಲಸಚಿವರನ್ನಾಗಿ ನೇಮಕ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಲಾಗಿತ್ತು.

ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಮುಡಾ ಹಿಂದಿನ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್, ಡಿ.ಬಿ.ನಟೇಶ್ ಇಬ್ಬರು ಮುಡಾದಲ್ಲಿನ ಭ್ರಷ್ಟಾಚಾರದಲ್ಲಿ ಪ್ರಮುಖ ಕಾರಣಕರ್ತರಾಗಿದ್ದು, ಸುಮಾರು 5 ಸಾವಿರ ಕೋಟಿ ರೂ. ನಷ್ಟು ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ವಕೀಲ ಅರುಣ್ ಕುಮಾರ್ ದೂರು ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News