'ಮುಡಾ' ಪ್ರಕರಣ | ಕಾನೂನು ಹೋರಾಟಕ್ಕೆ ಸಂಪುಟ ಸಭೆ ತೀರ್ಮಾನ

Update: 2024-08-01 09:58 GMT

PC : x/@DKShivakumar

ಬೆಂಗಳೂರು : ಮುಡಾ ಪ್ರಕರಣದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದಿರುವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸುವುದು ಹಾಗೂ ಈ ಬಗ್ಗೆ ಕಾನೂನು ಹೋರಾಟಕ್ಕೆ ಸಂಪುಟ ಸಭೆ ನಿರ್ಧರಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News