ಮುಡಾ ಪ್ರಕರಣ | ಸಿಎಂ ವಿಚಾರಣೆ ಆರಂಭ
ಮೈಸೂರು,ನ. 6: ಮುಡಾ ಅಕ್ರಮ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿಚಾರಣೆ ಆರಂಭಗೊಂಡಿದೆ.
ಬೆಂಗಳೂರಿನಿಂದ ರಸ್ತೆ ಮೂಲಕ ಬುಧವಾರ ಬೆಳಿಗ್ಗೆ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ, ಸರ್ಕಾರಿ ಅತಿಥಿಗೃಹದಲ್ಲಿ ಬೆಳಗಿನ ಉಪಹಾರ ಸೇವಿಸಿ ನಂತರ ಲೋಕಾಯುಕ್ತ ಕಚೇರಿಗೆ ತೆರಳಿದರು.
ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿಚಾರಣೆ ಆರಂಭಿಸಿದ್ದಾರೆ.
ಮುಡಾ ದಲ್ಲಿ 50:50 ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿ 14 ನಿವೇಶನ ನೀಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಡಿಸೆಂಬರ್ ಅಂತ್ಯದ ಒಳಗೆ ವರದಿ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು.
ಸಿಎಂ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಆ ಮಾರ್ಗದ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಲಾಗಿದೆ.