ಮುಡಾ ಪ್ರಕರಣ | ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ನ್ಯಾಯಾಲಯಕ್ಕೆ ಈಡಿ ಅರ್ಜಿ

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ತನಿಖಾ ವರದಿಯನ್ನು ತಿರಸ್ಕರಿಸುವಂತೆ ಜಾರಿ ನಿರ್ದೇಶನಾಲಯ(ಈಡಿ) ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
8 ಪುಟಗಳ ತಕರಾರು ಅರ್ಜಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಸಾಕಷ್ಟು ಸಾಕ್ಷಿಗಳು ಇವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಿದ್ದರೂ ಅವರು ಯಾವ ತಪ್ಪೂ ಮಾಡಿಲ್ಲ ಅಂದಿದ್ದಾರೆ. ಹೀಗಾಗಿ ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ಮನವಿ ಮಾಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ ನಡೆಸಿವೆ. ಲೋಕಾಯುಕ್ತ ಅಧಿಕಾರಿಗಳು ತಾವು ನಡೆಸಿದ ತನಿಖಾ ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ತನಿಖಾ ವರದಿಯನ್ನು ತಿರಸ್ಕರಿಸುವಂತೆ ಈಡಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.