ಮುಡಾ ಪ್ರಕರಣ: ಕಾಂಗ್ರೆಸ್ ನಾಯಕರಿಂದ ‘ರಾಜಭವನ ಚಲೋ’

Update: 2024-08-31 06:49 GMT

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್​ ನಾಯಕರು ಆಯೋಜಿಸಿರುವ ರಾಜಭವನ ಚಲೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ.

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು ರಾಜಭವನದ ವರೆಗೂ ಬೃಹತ್ ಕಾಲ್ನಾಡಿಗೆ ಜಾಥಾ ನಡೆಯುತ್ತಿದೆ. 

ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್​ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್​ ನಾಯಕರು ರಾಜಭವನ ಚಲೋ  ಮೂಲಕ ಆಗ್ರಹಿಸಲಿದ್ದಾರೆ. 

ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಡಿ.ಸುಧಾಕರ್, ಹೆಚ್.ಕೆ. ಪಾಟೀಲ್, ಬೋಸರಾಜು, ಶರಣಪ್ರಕಾಶ್ ಪಾಟೀಲ್, ಝಮೀರ್ ಅಹ್ಮದ್, ಈಶ್ವರ್ ಖಂಡ್ರೆ, ವೆಂಕಟೇಶ್, ಎಸ್.ಎಸ್ ಮಲ್ಲಿಕಾರ್ಜುನ್, ದಿನೇಶ್ ಗುಂಡೂರಾವ್, ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ನಯನ ಮೋಟಮ್ಮ, ಕಂಪ್ಲಿ ಗಣೇಶ್, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್, ಸುಧಾಮ್ ದಾಸ್, ಐವಾನ್ ಡಿಸೋಜ, ಸಂಸದರಾದ ಶ್ರೇಯಸ್ ಪಟೇಲ್, ಹಿರಿಯ ಮುಖಂಡರಾದ ವೀರಪ್ಪ ಮೊಯ್ಲಿ, ಎಂ.ಆರ್ ಸೀತಾರಾಮ್, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News