ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಮೇ 7ಕ್ಕೆ ವಿಚಾರಣೆ ಮುಂದೂಡಿಕೆ

Update: 2025-04-15 16:50 IST
Photo of  Siddaramaiah

 ಸಿದ್ದರಾಮಯ್ಯ

  • whatsapp icon

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ.ರಿಪೋರ್ಟ್ ಪ್ರಶ್ನಿಸಿ ಈಡಿ ತಕರಾರು ಅರ್ಜಿ ಸಲ್ಲಿಸಬಹುದು ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತಿಳಿಸಿದೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ.ರಿಪೋರ್ಟ್​​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ.ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ. ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ.

ಅಲ್ಲದೆ, ಜಾರಿ ನಿರ್ದೇಶನಾಲಯ ಕೂಡಾ ತಕರಾರು ಅರ್ಜಿ ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸರ ಅಂತಿಮ‌ ವರದಿ ಬಳಿಕವೇ ಬಿ.ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ನ್ಯಾಯಾಲಯ ಸೂಚನೆ ನೀಡಿ, ಮೇ 7ಕ್ಕೆ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News