ಮುಡಾ ತೀರ್ಪು | ರಾಜ್ಯಪಾಲರ ಪ್ರಯತ್ನ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ : ಕಾಂಗ್ರೆಸ್‌

Update: 2024-09-24 08:08 GMT

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್/ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದೆ.

ಈ ಬೆನ್ನಲ್ಲೇ ಕಾಂಗ್ರೆಸ್‌, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, "ಹೋರಾಟ ಮುಂದುವರೆಯಲಿದೆ, ಸರಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ" ಎಂದು ತಿಳಿಸಿದೆ.

"ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ. ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆ" ಎಂದು ಅಸಮಾಧಾನ ವ್ಯಕ್ತಪಡಿಸಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News