ಮೂಡಿಗೆರೆ | ಕಾಫಿ ತೋಟದಲ್ಲಿ ಬೀಡು ಬಿಟ್ಟ ಕಾಡಾನೆಗಳ ಹಿಂಡು: ಆತಂಕದಲ್ಲಿ ಗ್ರಾಮಸ್ಥರು

Update: 2023-08-01 14:51 GMT

ಮೂಡಿಗೆರೆ, ಆ.1: ತಾಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿರುವ ಟಾಟಾ ಎಸ್ಟೇಟ್‍ನಲ್ಲಿ 16 ಕಾಡಾನೆಗಳು ಬೀಡು ಬಿಟ್ಟಿವೆ. ಕಳೆದ ಅನೇಕ ದಿನಗಳಿಂದ ಜಿ.ಹೊಸಳ್ಳಿ, ಅರೇಹಳ್ಳಿ, ಚೀಕನಹಳ್ಳಿ, ಮಾಕೋನಹಳ್ಳಿ, ಮಲಸಾವರ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಕಾಡಾನೆಗಳು ಸುತ್ತು ಹೊಡೆಯುತ್ತಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳ ಭೀತಿಯಿಂದ ಗ್ರಾಮಸ್ಥರು ಮನೆ ಬಿಟು ಹೊರಗೆ ಬಾರದಂತಾಗಿದೆ.

ಕಾಡಾನೆ ಗುಂಪಿನಲ್ಲಿ ಮರಿಯಾನೆಗಳು ಇದ್ದು, ಕಾಡಾನೆಗಳ ಹಿಂಡಿನಿಂದ ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆನಷ್ಟವನ್ನು ಉಂಟಾಗುತ್ತಿದೆ. ಕಾಡಾನೆಗಳ ಭೀತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಸಂದರ್ಭದಲ್ಲಿ ಎಲ್ಲಿ ಆನೆಗಳು ಪ್ರತ್ಯಕ್ಷವಾಗುತ್ತವೆ ಎಂದು ಜನರು ಆತಂಕದಿಂದ ಬದುಕುವಂತಾಗಿದೆ. ಅರಣ್ಯ ಇಲಾಖೆಯ ಎಲಿಪೆಂಟ್ ಟಾಸ್ಕ್ ಪೊರ್ಸ್ ಸಿಬ್ಬಂದಿ ಆನೆಗಳನ್ನು ಓಡಿಸಲು ಪ್ರಯತ್ನಿಸಿದರೂ ಅವು ಸ್ಥಳಬಿಟ್ಟು ಕದಲುತ್ತಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 16 ಕಾಡಾನೆಗಳ ಗುಂಪು ಎಸ್ಟೇಟ್‍ನಲ್ಲಿ ಕಳೆದ ಕೆಲ ದಿನಗಳಿಂದ ಬೀಡು ಬಿಟ್ಟಿದ್ದು, ತೋಟದಾದ್ಯಂತ ಅಲೆದಾಡುತ್ತಾ ಕಾಫಿ ತೋಟಗಳನ್ನು ನಾಶಪಡಿಸುತ್ತಿವೆ. ಇದರಿಂದ ಕಾಫಿ ತೋಟಗಳಿಗೆ ಹೋಗಲು ರೈತರು ಭಯಪಡುವಂತಾಗಿದೆ. ಕಾರ್ಮಿಕರೂ ಸಹ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News