ಮೂಡಿಗೆರೆ: ಹೆದ್ದಾರಿ ಮಧ್ಯೆ ಉರುಳಿಬಿದ್ದ ಪ್ಲೈವುಡ್ ಸಾಗಾಟದ ಲಾರಿ

Update: 2023-09-17 05:23 GMT

ಚಿಕ್ಕಮಗಳೂರು, ಸೆ.17: ಪ್ಲೈವುಡ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿದ್ದ ಬಳಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆಯಿಂದ ಪ್ಲೈವುಡ್ ಹೇರಿಕೊಂಡು ಮಹಾರಾಷ್ಟ್ರದತ್ತ ಹೊರಟಿದ್ದ ಲಾರಿ ಬಣಕಲ್ ಸಮೀಪದ ಹೊರಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಮಧ್ಯೆದಲ್ಲೇ ಉರುಳಿಬಿದ್ದಿದೆ.

ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News