ಮೂಡಿಗೆರೆ | ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಮೃತ್ಯು

Update: 2023-10-26 10:28 GMT

ಚಿತ್ರ-  ಪ್ರಪಾತದಲ್ಲಿ ಕಾರು | ಮೃತ ರಂಜನ್ 

ಚಿಕ್ಕಮಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಮೂಡಿಗೆರೆ ತಾಲೂಕಿನ ಅಬ್ರುಗೋಡಿಗೆ ಸಮೀಪ ವರದಿಯಾಗಿದೆ. 

ರಂಜನ್ (38) ಮೃತ ಚಾಲಕ ಎಂದು ಗುರುತಿಸಲಾಗಿದೆ. 

ರಂಜನ್ ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದರು ಎನ್ನಲಾಗಿದ್ದು, ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಅಬ್ರುಗೋಡಿಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಆದರೂ ತಡೆ ಗೋಡೆ ನಿರ್ಮಿಸದೆ ನಿರ್ಲಕ್ಷ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News