ಮುರುಡೇಶ್ವರ: ಇಬ್ಬರು ಯುವಕರು ಸಮುದ್ರ ಪಾಲು

Update: 2023-10-24 05:47 GMT

ಸಾಂದರ್ಭಿಕ ಚಿತ್ರ

ಭಟ್ಕಳ: ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿರುವ ಘಟನೆ ಮುರುಡೇಶ್ವ ಸಮುದ್ರ ತೀರದಲ್ಲಿ ನಡೆದಿದೆ.

ಮೃತಪಟ್ಟ ಇಬ್ಬರು ಕೂಡ ಬಾಗಲಕೋಟೆ ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರಲ್ಲಿ ಓರ್ವ ಮಂಜುನಾಥ ರಮೇಶ ಹಡಪದ(25) ಬಾಗಲಕೋಟೆ ಜಿಲ್ಲೆಯ ನೀರ ಬೂದಿಹಾಳನವನಾಗಿದ್ದು, ಹಾಲಿ ನವನಗರದಲ್ಲಿ ವಾಸವಾಗಿದ್ದನು. ತನ್ನ ಕುಟುಂಬದವರೊಂದಿಗೆ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಈತ ಕುಟುಂಬ ಸದಸ್ಯರೊಂದಿಗೆ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಇನ್ನೋರ್ವನನ್ನು ಬಾಗಲಕೋಟೆ ಜಿಲ್ಲೆಯ ಲೋಕಾಪುರ ನಿವಾಸಿ ಕ್ರಷ್ಣಪ್ಪ ಕರಿಯಪ್ಪ ಹರಕಂಗಿ (18) ಎಂದು ಗುರುತಿಸಲಾಗಿದೆ. ಈತ ತನ್ನ ಧಾರವಾಡ ಮೂಲದ ನಾಲ್ಕು ಜನ ಸ್ನೇಹಿತರೊಂದಿಗೆ ಮುರುಡೇಶ್ವ ಪ್ರವಾಸಕ್ಕೆ ಬಂದಿದ್ದು, ದೇವಸ್ಥಾನದ ಎಡ ಬದಿಯ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ.

 ರಜೆಯ ಹಿನ್ನೆಲೆಯಲ್ಲಿ ಮುಡೇಶ್ವರದಲ್ಲಿ ಪ್ರವಾಸಿಗರು ಹೆಚ್ಚಿದ್ದು ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಎಷ್ಟೇ ಬಾರಿ ಸೂಚಿಸಿದರೂ ಇದನ್ನು ಧಿಕ್ಕರಿಸಿ ಸಮುದ್ರಕ್ಕೆ ಇಳಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ಮುರುಡೇಶ್ವ ಪೊಲೀಸ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News