ಮೈಸೂರು: ಹುಲಿ ದಾಳಿಗೆ ರೈತ ಬಲಿ

Update: 2023-10-02 18:03 GMT

ಸಾಂದರ್ಭಿಕ ಚಿತ್ರ (PTI)

ಮೈಸೂರು,ಅ.2: ದನ ಮೇಯಿಸಲು ತೆರಳಿದ್ದ ದನಗಾಹಿ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ದನಗಾಹಿಯೊಬ್ಬರು ಸಾವಿಗೀಡಾಗಿರುವ ಘಟನೆ ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸೋಮವಾರ ವರದಿಯಾಗಿದೆ.

ಹುಲಿದಾಳಿಗೆ ಬಲಿಯಾದ ವ್ಯಕ್ತಿಯನ್ನು ಹುಣಸೂರು ತಾಲೂಕು ಹನಗೋಡು ಹೋಬಳಿ ಉಡುವೆಪುರ ಗ್ರಾಮದ ದಿ.ದಾಸೇಗೌಡರ ಪುತ್ರ ಗಣೇಶ್(55) ಎಂದು  ಗುರುತಿಸಲಾಗಿದೆ. ಮೃತ ವ್ಯಕ್ತಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ.

ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ  ಎಂದಿನಂತೆ ಸೋಮವಾರ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತತ್ ಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಅವರೊಟ್ಟಿಗೆ ಅರಣ್ಯದಲ್ಲಿ ಹುಡುಕಾಟ ನಡೆಸಿದ ವೇಳೆ ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್‌ರ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ತಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News