ಮೈಸೂರು ದಸರಾ | ಯುವ ಸಂಭ್ರಮಕ್ಕೆ ಚಾಲನೆ ನೀಡಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ

Update: 2023-10-06 17:14 GMT

ಮೈಸೂರು,ಅ.6: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಯುವ ಸಂಭ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಚಲನಚಿತ್ರ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಮೂಲಕ ಯುವ ಸಂಭ್ರಮಕ್ಕೆ ಮೆರುಗು ನೀಡಿದರು.

ರಾಜ್ಯದ 400 ಕ್ಕೂ ಹೆಚ್ಚು ಕಾಲೇಜುಗಳ 1200 ಕ್ಕೂ ಹೆಚ್ಚು ಯುವಕರು, ಯುವತಿಯರು ಯುವ ಸಂಭ್ರಮದಲ್ಲಿ ಭಾಗವಹಿಸಿದ್ದು, ಮೊದಲ ದಿನವಾದ ಇಂದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕøತಿ ಕಾರ್ಯಕ್ರಮಗಳು ಜರುಗಿದವು.

ಯುವ ಸಂಭ್ರಮದಲ್ಲಿ ಆಯ್ಕೆಯಾದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯುವ ದಸರಾದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಯುವ ಸಂಭ್ರಮದ ಆಚರಣೆಯಲ್ಲಿ ಹೊಸ ಕಲಾಪ್ರತಿಭೆಗಳನ್ನು ಹೊರತುವ ಉದೇಶವಾಗಿದೆ.

ಕಾರ್ಯಕ್ರಮದಲ್ಲಿ ಮೈಸೂರು ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, ಶಾಸಕರುಗಳಾದ ಕೆ.ಹರೀಶ್ ಗೌಡ, ಡಿ.ರವಿಶಂಕರ್, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಯುವ ಸಂಭ್ರಮ ವಿಶೇಷಾಧಿಕಾರಿ ಸೀಮಾ ಲಾಟ್ಕರ್, ಜಿ.ಪಂ. ಸಿಇಓ ಗಾಯಿತ್ರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News