ಕೋಲಾರ | ವಿದ್ಯಾರ್ಥಿನಿಯರ 5 ಸಾವಿರ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕ ಮುನಿಯಪ್ಪನಿಗೆ ಸಂಕಷ್ಟ
ಬೆಂಗಳೂರು : ಮೊಬೈಲ್ ಫೋನಿನಲ್ಲಿ ವಿದ್ಯಾರ್ಥಿನಿಯರ ನಗ್ನ ಫೋಟೋ, ವಿಡಿಯೋ ಮಾಡಿ ಇಟ್ಟುಕೊಂಡಿದ್ದ ಹಾಗೂ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೋ ಪ್ರಕರಣ ರದ್ದು ಕೋರಿ ಕೋಲಾರದ ಶಿಕ್ಷಕನೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿ ಆದೇಶಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಮೊಬೈಲ್ನಲ್ಲಿ ಸುಮಾರು 5 ಸಾವಿರ ನಗ್ನ ವಿಡಿಯೋಗಳು ಪತ್ತೆಯಾಗಿದ್ದವು.
ವಿದ್ಯಾರ್ಥಿಗಳಿಂದ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಸಲಾಗಿತ್ತು. ಆದರೆ, ತನಿಖೆ ವೇಳೆ ಭಯಾನಕ ಸತ್ಯ ಹೊರಬಂದಿತ್ತು. ತನಿಖೆ ಸಂದರ್ಭ ಶಿಕ್ಷಕ ಮುನಿಯಪ್ಪನ 4 ಮೊಬೈಲ್ಗಳನ್ನು ಸೀಝ್ ಮಾಡಲಾಗಿತ್ತು. ಮೊಬೈಲ್ ಪರಿಶೀಲನೆ ಮಾಡಿದಾಗ ಹೆಣ್ಣು ಮಕ್ಕಳ ನಗ್ನ ವಿಡಿಯೋ, ಫೋಟೋಗಳು ಪತ್ತೆಯಾಗಿದ್ದವು. ಹೀಗಾಗಿ ಶಿಕ್ಷಕನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
2023ರ ಡಿಸೆಂಬರ್ 17ರಂದು ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದ್ದ ಪ್ರಕರಣ ಇದಾಗಿದೆ. ಆ ಸಂದರ್ಭದಲ್ಲಿ, ಮಕ್ಕಳಿಗೆ ಶಿಕ್ಷಕ ಚಿತ್ರಹಿಂಸೆ ನೀಡಿ ರೆಕಾರ್ಡ್ ಮಾಡಿದ್ದ ವಿಡಿಯೋ ವೈರಲ್ ಕೂಡ ಆಗಿತ್ತು. ಹೀಗಾಗಿ ಶಿಕ್ಷಕ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿತ್ತು. ಹೀಗಾಗಿ ಆರೋಪಿ ಶಿಕ್ಷಕ ಪ್ರಕರಣ ರದ್ದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು.