ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ: ಹೈಕೋರ್ಟ್

Update: 2024-03-14 15:57 GMT

ಬೆಂಗಳೂರು: ಸೇವಾ ವಿಷಯಗಳಿಗೆ ಸಂಬಂಧಿಸಿದ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಪರಿಶಿಷ್ಟ ಜಾತಿಗೆ ಸೇರಿದ ಸಿಬ್ಬಂದಿಯೊಬ್ಬರಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್  ರದ್ದುಪಡಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಸಿಬ್ಬಂದಿ ವಿ.ಶ್ರೀನಿವಾಸ್ ತನ್ನ ಜೇಷ್ಠತೆಯ ( ಹಿರಿತನದ) ಆಧಾರದ ಮೇಲೆ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉನ್ನತ ಹುದ್ದೆ ನೀಡಿಲ್ಲ ಎಂದು ಆಕ್ಷೇಪಿಸಿ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಸಿಬ್ಬಂದಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸಚ್ಚಿನ್ ಶಂಕರ್ ಮಗ್ದಮ್ ಅವರ ಏಕಸದಸ್ಯ ಪೀಠ ರಾಜ್ಯ ಸರಕಾರದ ಮನವಿಯನ್ನು ಪುರಸ್ಕರಿಸಿದೆ ಹಾಗೂ ರಾಷ್ಟ್ರೀಯ ಆಯೋಗದ ಅದೇಶವನ್ನು ರದ್ದುಗೊಳಿಸಿದೆ.

ವಿಚಾರಣೆ ಆಲಿಸಿದ ನ್ಯಾಯಪೀಠ, ಸೇವಾ ವಿಷಯಗಳಿಗೆ ಸಂಬಂಧಿಸಿದ ಜೇಷ್ಠತೆಯ ಆಧಾರದ ಮೇಲೆ ( ಹಿರಿತನ) ಹಾಗೂ ಬಡ್ತಿಯ ಕುರಿತಾಗಿ ದಾಖಲಾದ ದೂರಗಳನ್ನು ಇತ್ಯರ್ಥಪಡಿಸುವ ಹಾಗೂ ನಿರ್ಣಯಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಪುನರುಚ್ಚರಿಸಿದೆ. ಅಲ್ಲದೆ, ಇಂತಹ ಪ್ರಕರಣಗಳು ಕಾನೂನಿನ ವ್ಯಾಪ್ತಿಯೊಳಗೆ ಬರುತ್ತವೆ ಮತ್ತು ಸೇವೆ-ಸಂಬಂಧಿತ ವಿವಾದಗಳಲ್ಲಿ ಸಾಮರ್ಥ್ಯವಿರುವ ಆಡಳಿತಾತ್ಮಕ ನ್ಯಾಯಮಂಡಳಿಗಳಂತಹ ವಿಶೇಷ ತೀರ್ಪುಗಾರ ಸಂಸ್ಥೆಗಳಿಂದ ನಿರ್ಣಯಕ್ಕೆ ಒಳಪಟ್ಟಿರುತ್ತವೆ ಎಂದಿದೆ. ಜತೆಗೆ ರಾಷ್ಟ್ರೀಯ ಆಯೋಗದ ನಿರ್ಧಾರವು ಅಪೆಕ್ಸ್ ಕೋರ್ಟ್ ನೀಡಿರುವ ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News