ರಾಷ್ಟ್ರೀಯ ವಿಚಾರ ಸಂಕಿರಣ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Update: 2024-09-25 04:50 GMT

ಮಲಪ್ಪುರಂ: ಆರ್ಯಾಡನ್ ಮುಹಮ್ಮದ್ ಸಂಸ್ಮರಣಾ ಸಮಿತಿ ಕೇರಳದ ನಿಲಂಬೂರು ನಗರದಲ್ಲಿ ಇಂದು ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಕೇರಳಕ್ಕೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಗಳು ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬಳಿಕ ಮುಖ್ಯಮಂತ್ರಿಗಳು ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣ ಮಾಡಿ ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News