ಪ್ರಜ್ವಲ್ ರೇವಣ್ಣ ಪ್ರಕರಣ: ಕರ್ನಾಟಕ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ಪತ್ರ
Update: 2024-04-30 08:00 GMT
ಹೊಸದಿಲ್ಲಿ: ಹಾಸನದ ಜೆಡಿ(ಎಸ್) ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ ಬರೆದಿದೆ.
ಈ ಘಟನೆಯನ್ನು ಕಟುವಾಗಿ ಖಂಡಿಸಿರುವ ಆಯೋಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತಂತೆ ಮೂರು ದಿನಗಳೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಡಿಜಿಪಿಗೆ ಸೂಚನೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಹಲವಾರು ಅಶ್ಲೀಲ ವೀಡಿಯೋಗಳು ಹಾಗೂ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬುದನ್ನು ಸೂಚಿಸುವ ವೀಡಿಯೋಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಇದು ಕಳವಳಕಾರಿಯಾಗಿದೆ. ಇದು ಮಹಿಳೆಯರ ಸುರಕ್ಷತೆಯನ್ನು ಬಾಧಿಸುವ ಪ್ರಕರಣವಾಗಿರುವುದರಿಂದ ಈ ಕುರಿತು ಪೊಲೀಸ್ ಇಲಾಖೆಯಿಂದ ನಿರ್ಣಾಯಕ ಕ್ರಮವನ್ನು ಆಯೋಗ ನಿರೀಕ್ಷಿಸುತ್ತದೆ ಎಂದು ಪತ್ರದಲ್ಲಿ ಬರೆಯಲಾಗಿದೆ.