ರಾಜ್ಯದಲ್ಲಿ ಎನ್‌ಡಿಎ 19, ಇಂಡಿಯಾ 9 ಕ್ಷೇತ್ರದಲ್ಲಿ ಮುನ್ನಡೆ

Update: 2024-06-04 04:46 GMT

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸು ಪಡೆದುಕೊಂಡಿದ್ದು, ಬಿಜೆಪಿ 17, ಕಾಂಗ್ರೆಸ್ 9‌  ಹಾಗೂ ಜೆಡಿಎಸ್‌ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದಾರೆ. ಸುನೀಲ್ ಬೋಸ್ 1,50,701 ಮತಗಳನ್ನು ಪಡೆದರೆ,‌ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ 1,19,922 ಮತಗಳನ್ನು ಪಡೆದಿದ್ದಾರೆ. ಇದರೊಂದಿಗೆ ಸುನೀಲ್ ಬೋಸ್ 30,779ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಣಣ ವಿರುದ್ಧ 35467 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ್‌ , ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್‌ ಮುನ್ನಡೆಯಲ್ಲಿದ್ದಾರೆ.

ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಮೂರನೇ ಸ್ಥಾನದಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮುನ್ನಡೆಯಲ್ಲಿದ್ದಾರೆ. 

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಕಾಂಗ್ರೆಸ್‌ ನ ಶ್ರೇಯಸ್‌ ವಿರುದ್ಧ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 2015 ಮತಗಳ ಮುನ್ನಡೆಯಲ್ಲಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಜಗದೀಶ್‌ ಶೇಟ್ಟರ್‌ ಮುನ್ನಡೆ ಪಡೆದಿದ್ದಾರೆ.

ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸುರೇಶ್‌ ವಿರುದ್ಧ  ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News