ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಡೆಗೆ ಅಗತ್ಯ ಕ್ರಮ: ಸಚಿವ ಈಶ್ವರ ಖಂಡ್ರೆ

Update: 2023-12-07 10:33 GMT

ಬೆಳಗಾವಿ, ಡಿ. 7: ಬೆಂಗಳೂರಿನಲ್ಲಿ 2,500 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 403 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ ಒತ್ತುವರಿಯನ್ನು ತೆರವುಗೊಳಿಸುವುದಕ್ಕೆ ಸರಕಾರ ಕ್ರಮಕೈಗೊಳ್ಳುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ವಿಧಾನಸಭೆಯಲ್ಲಿ ತಿಳಿಸಿದರು.

ಬಿಜೆಪಿ ಸದಸ್ಯ ಸತೀಶ ರೆಡ್ಡಿ ಅವರ  ಪ್ರಶ್ನೆಗೆ ಉತ್ತರಿಸಿದ ಅವರು, ʼಒತ್ತುವರಿ ತೆರವು ಕಾರ್ಯಕ್ಕೆ ಬೆಂಗಳೂರಿನ ಶಾಸಕರುಗಳು ಸಹ ಕೈಜೋಡಿಸಬೇಕು. ಈಗಾಗಲೇ ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಪ್ರದೇಶ ಕಡಿಮೆಯಾಗಿದ್ದು, ಮಾನವ-ಪ್ರಾಣಿ ಸಂಘರ್ಷ ಬೆಂಗಳೂರು ಮಹಾನಗರದಲ್ಲಿಯೂ ಕಂಡುಬರುತ್ತಿದೆ ಎಂದರು.

ಕಾಡಾನೆ ಹಾವಳಿಯನ್ನು ತಡೆಗಟ್ಟಲು ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನ ಬೆಂಗಳೂರು ಕೇಂದ್ರಸ್ಥಾನವನ್ನಾಗಿರಿಸಿ,ಬೆಂಗಳೂರು ಜಿಲ್ಲೆಗೆ ಜಿಲ್ಲಾ ಆನೆ ಕಾರ್ಯಪಡೆ ರಚಿಸಲಾಗಿದೆ. ಬೆಂಗಳೂರು ಜಿಲ್ಲೆಯ ಕಗ್ಗಲೀಪುರ/ಆನೇಕಲ್/ಯಲಹಂಕ/ಹೊಸಕೋಟೆ/ಕೆ.ಆರ್.ಪುರಂ ವಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಬೆಂಗಳೂರು ನಗರ ವಿಭಾಗದಲ್ಲಿ ಮಾನ್ವ ವನ್ಯಜೀವಿ ಸಂಘರ್ಷ ತಡೆಗಟ್ಟಲು ಕಗ್ಗಲೀಪುರ ವಲಯದಲ್ಲಿ ಮೂರು ಮತ್ತು ಆನೇಕಲ್ ವಲಯದಲ್ಲಿ ಮೂರು ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡಗಳನ್ನು ನಿರ್ವಹಿಸಲಾಗುತ್ತಿದೆ. ಅಲ್ಲದೆ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ,ಅರಣ್ಯ ರಕ್ಷಣೆ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಡ್ಲೂನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರ್ಯಚರಣೆಯಲ್ಲಿ ಚಿರತೆ ಪ್ರಾಣ ತೆಗೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಚಿರತೆ ಸತ್ತಿದ್ದಕ್ಕೆ ವಿಷಾದ ಇದೆ. ಚಿರತೆ ಹಾವಳಿ ಸಮಸ್ಯೆ ಬಗೆಹರಿಸಲು ಎಲ್ಲ ಕ್ರಮ ತತೆಗೆದುಕೊಳ್ಳುತ್ತೇವೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಶಾಸಕರುಗಳು ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರಲು ಕ್ರಮವಹಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News