ನಿರುದ್ಯೋಗಿ ಯುವಕರಿಗೆ ʼಯುವನಿಧಿʼ ಜತೆಗೆ ಉದ್ಯೋಗ ಸೃಷ್ಟಿಸುವ, ಉದ್ಯೋಗಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಲಾಗುವುದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ8.40 ಏರಿಕೆಯಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ನಾವು ಯುವ ನಿಧಿಯನ್ನೂ ಕೊಡುತ್ತೇವೆ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರಕಾರ ವಿದ್ಯಾರ್ಥಿ ಯುವಜನರಿಗೆ ನೀಡುವ ಅಭಯ ಎಂದು ಭರವಸೆ ನೀಡಿದರು.
ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಡಿಸಿ ಗಳ ಜತೆಗೆ ಹೊಸದಾಗಿ ಇನ್ನಷ್ಟು ಜಿಟಿಡಿಸಿ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ ಮಾತನಾಡಿದರು.
— CM of Karnataka (@CMofKarnataka) February 26, 2024
ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ.… pic.twitter.com/cBgN4njazv