ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ| ಕೇಂದ್ರ ಸರಕಾರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಸಚಿವ ಭೋಸರಾಜು

Update: 2024-06-09 13:13 GMT

ಸಚಿವ ಭೋಸರಾಜು

ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕೇಂದ್ರ ಸರಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸರಿಯಾದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಭೋಸರಾಜು ಆಗ್ರಹಿಸಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಈ ಬಾರಿ ಆಶ್ಚರ್ಯಕರ ರೀತಿಯಲ್ಲಿ 67 ಜನ ವಿದ್ಯಾರ್ಥಿಗಳು 720/720 ಅಂಕ ಪಡೆದಿದ್ದು ಪ್ರತಿಷ್ಠಿತ ಏಮ್ಸ್‍ನಲ್ಲಿ ಲಭ್ಯ ಇರುವ ಪ್ರವೇಶಾತಿ ಸಂಖ್ಯೆಯೇ 56 ಆಗಿದ್ದು ಉಳಿದ 11 ವಿದ್ಯಾರ್ಥಿಗಳ ಆಸೆ ಭಗ್ನವಾಗುತ್ತದೆ. ಈ ಹಿನ್ನಲೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ತೀವ್ರ ಅನುಮಾನ ವ್ಯಕ್ತಪಡಿಸಿದ್ದು ತಕ್ಷಣ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಜೂ.14ಕ್ಕೆ ಘೋಷಣೆಯಾಗಬೇಕಾದ ಫಲಿತಾಂಶ ತರಾತುರಿಯಲ್ಲಿ ಜೂ.4ರಂದೇ ಘೋಷಣೆ ಮಾಡಿದ್ದು ಅನುಮಾನಕ್ಕೆ ಕಾರಣವಾಗಿದೆ. ನೀಟ್ ಪರೀಕ್ಷೆಯಲ್ಲಿ ಋಣಾತ್ಮಕ ಅಂಕ ನೀಡುವ ಕ್ರಮ ಇದ್ದರೂ ಇಷ್ಟೊಂದು ವಿದ್ಯಾರ್ಥಿಗಳು ಶೇ.100ರಷ್ಟು ಅಂಕಗಳಿಸಲು ಸಾಧ್ಯವಾಯ್ತು ಎನ್ನುವುದು ಆಶ್ಚರ್ಯ ಮೂಡಿಸುತ್ತದೆ. ಈ ಅನುಮಾನಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಲು ಕೇಂದ್ರ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News