ಮಂಗನ ಕಾಯಿಲೆಗೆ ಹೊಸ ಲಸಿಕೆ: ಸಚಿವ ದಿನೇಶ್ ಗುಂಡೂರಾವ್

Update: 2023-12-11 14:03 GMT

ಬೆಳಗಾವಿ: ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‍ಡಿ) ತಡೆಗೆ ಶೀಘ್ರದಲ್ಲೇ ಹೊಸ ಲಸಿಕೆ ನೀಡುವ ಗುರಿಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಎಸ್.ಅರುಣ್ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮಲೆನಾಡಿಗರನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್‍ಡಿ ಸಮಸ್ಯೆಯನ್ನು ಸರಕಾರ ಗಂಭೀರ ಪರಿಗಣಿಸಿದೆ. ಹಾಗಾಗಿ, ಐಸಿಎಂಆರ್ ನೊಂದಿಗೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದರು.

ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಲಸಿಕೆ ವಿತರಣೆಯನ್ನು ಸ್ಥಗಿತ ಮಾಡಲಾಗಿದೆ. ಏಕೆಂದರೆ ಈ ಲಸಿಕೆ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಆಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಖಾಸಗಿ ಕಂಪೆನಿಯ ಸಹಯೋಗದೊಂದಿಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇನ್ನೂ, ಮಂಗನ ಕಾಯಿಲೆ ಅತಿ ಕಡಿಮೆ ಜನರಿಗೆ ಬಾಧಿಸುತ್ತಿರುವ ಕಾರಣದಿಂದಲೇ ಇತರೆ ಕಂಪೆನಿಗಳು ಈ ಲಸಿಕೆ ಕಂಡು ಹಿಡಿಯಲು ಮುಂದಾಗುತ್ತಿಲ್ಲ.ಆದರೂ, ಸರಕಾರ ಸಂಶೋಧನೆಗೆ ಧನ ಸಹಾಯ ನೀಡುವುದಾಗಿಯೂ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆ ರೋಗಿಗಳಿಗೆ ನೀಡಲಾಗುವುದು ಎಂದೂ ಸಚಿವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News