ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ‌; ಸಿಎಂ ಜತೆ ಚರ್ಚೆ: ಶಾಮನೂರು ಶಿವಶಂಕರಪ್ಪ

Update: 2023-10-02 14:49 GMT

 ದಾವಣಗೆರೆ, ಅ.2: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ. ಈ ಬಗ್ಗೆ ಸಿಎಂ ಜೊತೆ ಮಾತಾಡುವೆ. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂಬುದನ್ನು ನಾನು ಸ್ಪಷ್ಟ ಪಡಿಸುವೆ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಲಿಂಗಾಯತ ಸಮಾಜದ 7 ಮಂದಿಗೆ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರಶ್ನೆ ಇಲ್ಲ. ಆದರೆ, ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದೇನೆ. ನಾನು ಸತ್ಯ ಹೇಳಿದ್ದೇನೆ. ಅದಕ್ಕೆ ಈ ವಿಚಾರ ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ ಎಂದು ನುಡಿದರು

ಎಚ್.ವಿಶ್ವನಾಥರನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ: ನಾನು ಸತ್ಯ ಹೇಳಿದ್ದೇನೆ. ಅಲ್ಲದೆ, ಜನರಿಂದ ಆಯ್ಕೆಯಾಗಿ ಏಳು ಬಾರಿ ಶಾಸಕನಾಗಿರುವೆ. ಎಚ್.ವಿಶ್ವನಾಥ ಅವರ ಹಾಗೆ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಮ್ಮೆಲ್ಸಿ ಆಗಿಲ್ಲ. ಅವರನ್ನು ಹುಚ್ಚಾಸ್ಪತ್ರೆಗೆ ಕಳುಹಿಸಬೇಕೆಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News