ಬಿಜೆಪಿಯ ಭ್ರಷ್ಟಾಚಾರ,ದುರಾಡಳಿಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್

Update: 2024-01-03 06:43 GMT

Photo: facebook/SharanPrakashPatil

ಶಿವಮೊಗ್ಗ: ಬಿಜೆಪಿಯವರು ಮಾಡಿದ ಭ್ರಷ್ಟಾಚಾರ,ದುರಾಡಳಿಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗಲಾದರೂ ಬಿಜೆಪಿಯವರು ಬುದ್ದಿ ಕಲಿತುಕೊಳ್ಳಬೇಕು ಎಂದು ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ.

ಹುಬ್ಬಳಿಯಲ್ಲಿ ಕರ ಸೇವಕನ ಬಂಧನ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ.ಕೇವಲ ರಾಜಕೀಯ ಮಾಡುತ್ತಿದ್ದಾರೆ. ಈ ಕಾರಣದಿಂದಲೇ ಜನ ಬಿಜೆಪಿಯನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ ಎಂದರು. 

ರಾಜ್ಯ ಸರ್ಕಾರದ ಐದನೆ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಯೋಜನೆಗೆ ಸ್ವಾಮಿ ವಿವೇಕಾನಂದ ಜಯಂತಿ ದಿನದವಾದ ಜ.12 ರಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ‌ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಗರದ ಪ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಲಿದ್ದಾರೆ ಎಂದರು.

ಒಂದು ಲಕ್ಷ ಜನ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯುವ ನಿಧಿ ಯೋಜನೆಯಡಿ ನೊಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೋಮಾ ಪಡೆದವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.ಈ‌ ನೋಂದಣಿ ನಿರಂತರವಾಗಿರುತ್ತದೆ. ಶಿವಮೊಗ್ಗದಲ್ಲಿ ಇಪ್ಪತೈದು ಸಾವಿರ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಕೋವಿಡ್ ಸಂಬಂಧ ಈಗಾಗಲೇ ಸಭೆ ನಡೆಸಲಾಗಿದೆ.ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ 22 ಮೆಡಿಕಲ್ ಕಾಲೇಜು,11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೂಚನೆ ನೀಡಿದ್ದೆವೆ.ಎಲ್ಲಾ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಹಾಕಲು‌ ಸೂಚನೆ ನೀಡಲಾಗಿದೆ.ಕೋವಿಡ್ ಪಾಸಿಟಿವ್ ರೇಟ್ ಜಾಸ್ತಿ ಇದೆ.30 ಸಾವಿರ ವ್ಯಾಕ್ಸಿನೇಷನ್‌ ಲಭ್ಯವಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.


Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News