ಅಶ್ಲೀಲ ವಿಡಿಯೋ ಪ್ರಕರಣ : ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ನಿಂದ ಉಚ್ಚಾಟನೆ
ಬೆಂಗಳೂರು : ಹಾಸನದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಇಂದು (ಎ. 29) ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, " ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಪ್ರ ಉಚ್ಚಾಟಿನೆ ಮಾಡಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ" ಎಂದು ಸ್ಪಷ್ಟಪಡಿಸಿದರು.
ಪ್ರಜ್ವಲ್ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟು ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೆ ಹೆದರಿ ಓಡಿ ಹೋಗಲ್ಲ: ‘ಇದಕ್ಕೆಲ್ಲಾ ಹೆದರಿ ಓಡಿಹೋಗುವ ವ್ಯಕ್ತಿ ನಾನಲ್ಲ. ಕಾನೂನು ಪ್ರಕಾರ ಏನು ಕ್ರಮ ತಗೆದುಕೊಳ್ಳುತ್ತಾರೋ, ತೆಗೆದುಕೊಳ್ಳಲಿ. ಪ್ರಜ್ವಲ್ ಮಾಮೂಲಿಯಾಗಿ ವಿದೇಶಕ್ಕೆ ಹೋಗಬೇಕಿತ್ತು, ಹೋಗಿದ್ದಾನೆ. ಪ್ರಜ್ವಲ್‍ಗೆ ತನ್ನ ವಿರುದ್ಧ ಎಫ್‍ಐಆರ್ ದಾಖಲಾಗುವ ಬಗ್ಗೆ ಗೊತ್ತಿರಲಿಲ್ಲ. ಅವನೆಲ್ಲೇ ಇದ್ದರೂ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಬರುತ್ತಾನೆ. ಆದರೆ, ಉಚ್ಚಾಟನೆ ಮಾಡುವುದು ಪಕ್ಷಕ್ಕೆ ಸೇರಿದ್ದು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.