ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
Update: 2024-08-05 16:42 GMT
ಬೆಂಗಳೂರು : ರಾಜ್ಯ ಸರಕಾರವು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.
ಸೋಮವಾರ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಅವರು, ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.