ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ NIA ವಶಕ್ಕೆ

Update: 2024-04-05 11:36 GMT

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ 'X'ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರೆಸ್ಸೆಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದೆ ಮುಂಜಾನೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಅದರ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿಯ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದು ಕರೆದೊಯ್ದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ. ಆದರೆ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದಿರುವ ಬಗ್ಗೆ ಎನ್.ಐ.ಎ. ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News