ನಿಫಾ ವೈರಸ್ | ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ; 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ವ್ಯವಸ್ಥೆಗೆ ಆರೋಗ್ಯ ಇಲಾಖೆ ಸೂಚನೆ

Update: 2023-09-13 16:21 GMT
ನಿಫಾ ವೈರಸ್ | ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ; 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ವ್ಯವಸ್ಥೆಗೆ ಆರೋಗ್ಯ ಇಲಾಖೆ ಸೂಚನೆ

ಸಾಂದರ್ಭಿಕ ಚಿತ್ರ

  • whatsapp icon

ಬೆಂಗಳೂರು, ಸೆ. 13: ‘ನಿಫಾ ವೈರಸ್’ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಮುನ್ನಚ್ಚರಿಕೆ ಕ್ರಮವಹಿಸಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ ಪ್ರತಿಕ್ರಿಯೆ ತಂಡದ ಸಭೆ ನಡೆಸಬೇಕು. ರಾಜ್ಯದ ಗಡಿ ಜಿಲ್ಲೆ ದಕ್ಷಿಣ ಕನ್ನಡದ ಎಲ್ಲ ಸರಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪಕರಣಗಳನ್ನು ದಾಖಲಿಸಿಕೊಂಡು, ಕೂಡಲೇ ಜಿಲ್ಲಾ ಕಣ್ಯಾವಲು ಕಚೇರಿ/ಘಟಕಕ್ಕೆ ತಿಳಿಸಲು ಎಚ್ಚರಿಕೆ ನೀಡಬೇಕು.

ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್‍ನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲ ಪಿಎಚ್‍ಸಿ ವೈದ್ಯಾಧಿಕಾರಿಗಳಿಗೆ ಜ್ವರದ ಕಣ್ಗಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ, ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗ ಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.

ಜಿಲ್ಲಾ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಶಂಕಿತ ಪ್ರಕರಣಗಳ ಮಾದರಿಗಳನ್ನು ಪುಣೆಯಲ್ಲಿನ ಎನ್‍ಐವಿ ಪಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ನಿಫಾ ವೈರಸ್ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಜಾಗೃತಿ ಮೂಡಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸಬೇಕು ಎಂದು ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News