ರಾಜ್ಯ ಸರಕಾರದಿಂದ ಗ್ಯಾರಂಟಿಗಳನ್ನು ನಿಲ್ಲಿಸುವ ಬ್ಲಾಕ್​ಮೇಲ್ : ನಿಖಿಲ್​ ಕುಮಾರಸ್ವಾಮಿ

Update: 2024-08-15 13:20 GMT

ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮೂಲಕ ರಾಜ್ಯ ಸರಕಾರ ಬ್ಲಾಕ್‍ಮೇಲ್ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ನಗರದ ಜೆ.ಪಿ.ಭವನದಲ್ಲಿ 78ನೆ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಜನತೆ ಗ್ಯಾರಂಟಿ ಕೇಳದಿದ್ದರೂ ಅವರು ಕೊಟ್ಟರು. ಆದರೆ, ಇದೀಗ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಹಾಗೆಯೇ ಗ್ಯಾರಂಟಿ ನಿಲ್ಲಿಸುವ ಮೂಲಕ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ರಾಜ್ಯ ಸರಕಾರದ ಕರ್ತವ್ಯ ಎಂದು ತಿಳಿಸಿದರು.

ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದರು. ಗೈಡ್‍ಲೈನ್ಸ್ ವ್ಯಾಲ್ಯೂ ಮೇಲೂ ಶೇ.30ರಷ್ಟು ಏರಿಕೆ ಮಾಡಿದ್ದಾರೆ. ಹಾಲಿನ ಪ್ರೋತ್ಸಾಹಧನ ಸಿಕ್ಕಿಲ್ಲ. ಹಗರಣಗಳ ರಾಜ್ಯದ ಹಣ ಲೂಟಿಯಾಗುತ್ತಿದೆ ಎಂದ ಅವರು, ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಜೆಡಿಎಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಟಿ.ಎ.ಶರವಣ, ಬೆಂಗಳೂರು ಜೆಡಿಎಸ್ ಘಟಕದ ಅಧ್ಯಕ್ಷ ರಮೇಶ್ ಗೌಡ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News