ಚನ್ನಪಟ್ಟಣ | ಉಪಚುನಾವಣೆಯ ದಿನಾಂಕ ಘೋಷಣೆ ಬಳಿಕ ಟಿಕೆಟ್ ನಿರ್ಧಾರ : ನಿಖಿಲ್ ಕುಮಾರಸ್ವಾಮಿ

Update: 2024-09-17 16:31 GMT

ಬೆಂಗಳೂರು : ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕುರಿತು ಬಿಜೆಪಿ-ಜೆಡಿಎಸ್ ವರಿಷ್ಠರು ಹೊಸದಿಲ್ಲಿಯಲ್ಲಿ ತೀರ್ಮಾನಿಸಿದ್ದು, ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಟಿಕೆಟ್ ಹಂಚಿಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲೆಯ ಅಕ್ಕೂರಿನಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ್, ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ, ನಾನು ಮತ್ತು ಅವರು ಪ್ರತ್ಯೇಕವಾಗಿ ಸಭೆ ನಡೆಸುತ್ತಾ ಪಕ್ಷ ಸಂಘಟನೆ ಮಾಡುತ್ತಿದ್ದೇವೆ ಎಂದು ನುಡಿದರು.

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಜಾತಿನಿಂದನೆಗೆ ಸಂಬಂಧಿಸಿದಂತೆ ಆಡಿಯೊ ತುಣುಕು ಹರಿದಾಡುತ್ತಿದ್ದೆ. ಅವರದ್ದೇನಾ ಎಂಬುದು ಮೊದಲು ಖಚಿತವಾಗಬೇಕಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಧ್ವನಿ ಯಾರದ್ದೆಂದು ಗೊತ್ತಾಗುತ್ತದೆ. ಹಾಗಾಗಿ, ಅವರ ಕುರಿತು ಈಗಲೇ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಾಗಮಂಗಲ ಘಟನೆಯೇ ಸಾಕ್ಷಿ. ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯಕ್ಕೆ ಅನ್ಯಾಯ ಮಾಡುವುದು ಎಷ್ಟು ಸರಿ ಎಂಬುದಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉತ್ತರಿಸಬೇಕು. ಅವರ ಓಲೈಕೆ ರಾಜಕಾರಣಕ್ಕೆ ಮುಂದೆ ಜನರೇ ಉತ್ತರ ನೀಡಲಿದ್ದಾರೆ ಎಂದು ನಿಖಿಲ್ ಎಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News