ಚನ್ನಪಟ್ಟಣ ಉಪಚುನಾವಣೆ | ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Update: 2024-10-25 09:28 GMT

ಬೆಂಗಳೂರು: ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಮ್ಮುಖದಲ್ಲಿ ಬೃಹತ್‌ ಮೆರವಣಿಗೆ ನಡೆಸಿ, ಬಳಿಕ ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದ್ದಾರೆ. 

ಗುರುವಾರವಷ್ಟೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದರು.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಸಂಸದ ರಾಘವೇಂದ್ರ, ನಿಖಿಲ್ ಪತ್ನಿ ರೇವತಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News