ಉಪ ಚುನಾವಣೆ | ಚನ್ನಪಟ್ಟಣದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ

Update: 2024-10-24 13:44 GMT

ಬೆಂಗಳೂರು : ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರು ಷೋಷಣೆಯಾಗಿದೆ. ಆ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿಯೋಗೇಶ್ವರ್‌ಗೆ ನಿಖಿಲ್‌ ಕುಮಾರಸ್ವಾಮಿ ಎದುರಾಳಿಯಾಗಿದ್ದಾರೆ.

ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಘೋಷಿಸಿದ್ದು, ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ಜೆಡಿಎಸ್‌ಗೆ ಚನ್ನಪಟ್ಟಣವನ್ನು ಬಿಟ್ಟುಕೊಟ್ಟಿತ್ತು.

ಬಿ.ಎಸ್.​ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಮನ್ವಯ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಎನ್‍ಡಿಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೇರಿದಂತೆ ಉಭಯ ಪಕ್ಷಗಳ ಶಾಸಕರು, ಮಾಜಿ ಸಚಿವರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News