ಯಡಿಯೂರಪ್ಪ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

Update: 2023-09-24 11:31 GMT

ಚಿತ್ರ-  facebook.com/Nikhil Gowda

ಬೆಂಗಳೂರು: ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆ ಬೆನ್ನಲ್ಲೇ ಜೆಡಿಎಸ್‌ ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. 

ರವಿವಾರ ಬೆಂಗಳೂರಿನ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ನಿಖಿಲ್‌, ಮಾಜಿ ಮುಖ್ಯಮಂತ್ರಿಗಳ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. 

ಈ ವೇಳೆ ಯಡಿಯೂರ‍ಪ್ಪನವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ನಿಖಿಲ್‌ ಕುಮಾರಸ್ವಾಮಿ, ಕೃಷ್ಣನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ʼʼಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ - ಬಿಜೆಪಿ ಮೈತ್ರಿಯ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರುʼʼ ಎಂದು ನಿಖಿಲ್ ತಮ್ಮ ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿದ್ದಾರೆ. 

ನಿಖಿಲ್‌ ಅವರ ಜೊತೆ ಮಾಜಿ ಸಚಿವ ಮುನಿರತ್ನ ಅವರು ಕೂಡ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News